ಯಾನಾಗುಂದಿಯಲ್ಲಿ ಮಾತಾ ಮಾಣಿಕೇಶ್ವರಿ ದೇವಿ 3ನೇ ಆರಾಧನಾ ಮಹೋತ್ಸವ.

 

ಜಿಲ್ಲೆಯ ಸೇಡಂ ತಾಲ್ಲೂಕಿನ ಯಾನಾಗುಂದಿ ಮಾಣಿಕೇಶ್ವರಿ ಬೆಟ್ಟದಲ್ಲಿ ಇದೇ ಮಾರ್ಚ್ 5ರಿಂದ 7ರವರೆಗೆ ಮಹಾಯೋಗಿನಿ ರೂಪ ರಹಿತ ಅಹಿಂಸಾ ಯೋಗೇಶ್ವರ್ ವೀರ ಧರ್ಮಜ ಮಾತಾ ಮಾಣಿಕೇಶ್ವರಿ ಮಾತೆಯ ಮೂರನೇ ಆರೋಧನಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ರೂಪ ಶ್ರೀ ರೂಪ ರಹಿತ ಅಹಿಂಸಾ ಯೋಗೇಶ್ವರ್ ವೀರಧರ್ಮಜ ಮಾತಾಜಿ ಟ್ರಸ್ಟ್ ಸದಸ್ಯ ಸಿದ್ರಾಮಪ್ಪ ಸಣ್ಣೂರ್ ಅವರು ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಕೇವಲ ಕರ್ನಾಟಕ ಮಾತ್ರವಲ್ಲದೇ ನೆರೆಯ ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ್ ಸೇರಿದಂತೆ ಹೊರ ರಾಜ್ಯಗಳಿಂದಲೂ ಸಹ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸುವರು ಎಂದರು.ಮಾರ್ಚ್ 5ರಂದು ಬೆಳಿಗ್ಗೆ 9 ಗಂಟೆಗೆ ಅಭಿಷೇಕ, 10 ಗಂಟೆಗೆ ಮಾತಾಜಿಯವರ ನಾಮಸ್ಮರಣೆ, 11 ಗಂಟೆಗೆ ಸತ್ಸಂಗ ಹಾಗೂ ರಾತ್ರಿ 9 ಗಂಟೆಗೆ ಭಜನಾ ಕಾರ್ಯಕ್ರಮಗಳು ಸೇರಿದಂತೆ ಸಂಕಲ್ಪ ನಿವಾರಣೆಯಾಗುವ ಕಾರ್ಯಕ್ರಮ ಜರುಗಲಿವೆ ಎಂದು ಅವರು ಹೇಳಿದರು.ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಎಲ್ಲ ಭಕ್ತರಿಗೂ ಮಹಾದಾಸೋಹ ವ್ಯವಸ್ಥೆಯನ್ನೂ ಸಹ ಕಲ್ಪಿಸಲಾಗಿದೆ ಎಂದು ತಿಳಿಸಿದ ಅವರು, ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ಕೋರಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆಲಸದ ಅವಧಿ ಹೆಚ್ಚಳ ವಿರೋಧಿಸಿ ವಿಧೇಯಕ ಪ್ರತಿ ದಹಿಸಿ ಪ್ರತಿಭಟನೆ.

Thu Mar 2 , 2023
  ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಠ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಿ ಹಾಗೂ ದುಡಿಯುವ ಮಹಿಳೆಯರನ್ನು ರಾತ್ರಿ ಪಾಳೆಯದಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಕಾರ್ಖಾನೆ ಕಾಯ್ದೆ 1948ಕ್ಕೆ ತಿದ್ದುಪಡಿ ಮಾಡಿ ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ವಿಧೇಯಕ 2023ರನ್ನು ಬಂಡವಾಳದಾರರ ಪರವಾಗಿ ರಾಜ್ಯ ಬಿಜೆಪಿ ಸರ್ಕಾರವು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಿರುವುದು ಕಾರ್ಮಿಕರ ವಿರೋಧಿ ನೀತಿ ಎಂದು ಆರೋಪಿಸಿ ಬುಧವಾರ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಜಿಲ್ಲಾ […]

Advertisement

Wordpress Social Share Plugin powered by Ultimatelysocial