ರಾಕಿಬಾಯ್ 37ನೇ ಹುಟ್ಟುಹಬ್ಬ

ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ. ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ. ಇಂದು ಜನವರಿ 8 ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬ.
ಕೆಜಿಎಫ್ ಚಿತ್ರದ ಸಕ್ಸಸ್ ನಂತರ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಬೆಳೆದ ಯಶ್ ಮುಂದಿನ ಅವರ ಪ್ರಾಜೆಕ್ಟ್ ಯಾವುದು, ನಟಿಸುತ್ತಿರುವ ಚಿತ್ರ ಯಾವುದು ಎಂದು ಘೋಷಿಸಿಲ್ಲ. ಅವರ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಇಂದು ಅವರ ಹುಟ್ಟುಹಬ್ಬದ ದಿನ ಹೊಸ ಚಿತ್ರದ ಘೋಷಣೆಯಾಗುತ್ತದೆ ಎಂದು ಹೇಳಲಾಗುತ್ತಿತ್ತ, ಆದರೆ ನಾನು ದೊಡ್ಡದಾದ ಪ್ರಾಜೆಕ್ಟ್ ತಯಾರಿಯಲ್ಲಿ ಪ್ರಾಮಾಣಿಕತೆಯಿಂದ ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದು ಸ್ವಲ್ಪ ಸಮಯ ತಾಳ್ಮೆಯಿಂದ ಕಾಯಿರಿ, ಹೇಳುತ್ತೇನೆ ಎಂದು ಅಭಿಮಾನಿಗಳಿಗೆ ಪತ್ರ ಬರೆದು ಪತ್ನಿ, ಮಕ್ಕಳೊಂದಿಗೆ ಬರ್ತ್ ಡೇ ಸೆಲೆಬ್ರೇಷನ್ ಗೆ ದುಬೈಗೆ ಹಾರಿದ್ದಾರೆ ಯಶ್. ಅಲ್ಲಿ ರೆಸ್ಟೋರೆಂಟ್ ಒಂದರಲ್ಲಿ ಕುಟುಂಬಸ್ಥರೊಂದಿಗೆ, ಸ್ನೇಹಿತರೊಂದಿಗೆ ಪಾರ್ಟಿ ಮಾಡುತ್ತಿರುವ ಫೋಟೋಗಳನ್ನು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಹಾಕಿ ಸಂಭ್ರಮಿಸುತ್ತಿದ್ದಾರೆ.
ದುಬೈಯ ಫೋಟೋಗಳು ವೈರಲ್ ಆಗಿವೆ. ಈ ನಡುವೆ ನಿರ್ಮಾಪಕ ವೆಂಕಟ್ ಕೋಣಂಕಿ ನಾರಾಯಣ ಜೊತೆ ಯಶ್ ನಿಂತುಕೊಂಡು ತೆಗೆಸಿಕೊಂಡಿರುವ ಫೋಟೋ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಸಿನೆಮಾ ಎಕ್ಸ್ ಪ್ರೆಸ್ ಗೆ ಲಭ್ಯವಾಗಿದೆ. ಯಶ್ ಅವರು ಮುಂದಿನ ಚಿತ್ರವನ್ನು ಕೆವಿಎನ್ ಪ್ರೊಡಕ್ಷನ್ ಅಡಿಯಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಾಡುತ್ತಿದ್ದಾರೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ. ಅದಕ್ಕೆ ಈ ಚಿತ್ರ ಪುಷ್ಠಿ ನೀಡುತ್ತಿದೆ. ಯಶ್ ಅವರ 37ನೇ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಈ ಫೋಟೋ ಒಂದು ಸಿಹಿ ಉಡುಗೊರೆ ಎನ್ನಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಗ್ರರ ಹುಟ್ಟಡಗಿಸಿದ ಸೇನೆ

Sun Jan 8 , 2023
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಭಾನುವಾರ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ. ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಭಾನುವಾರ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.ಹೊಸ […]

Advertisement

Wordpress Social Share Plugin powered by Ultimatelysocial