ಕುಕ್ಕೆಶ್ರೀ, ಧರ್ಮಸ್ಥಳ ದೇಗುಲಕ್ಕೆ ಯಶ್ ಭೇಟಿ,

 

ಸುಬ್ರಮಣ್ಯ, ಏಪ್ರಿಲ್ 10: ರಾಕಿಂಗ್ ಸ್ಟಾರ್ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟ ಯಶ್ ಹಾಗೂ ಅವರ ಸಂಗಡಿಗರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇಗುಲಗಳಿಗೆ ಭೇಟಿ ನೀಡಿದರು. ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಚಾಪ್ಟರ್ 2 ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಮೊದಲಿಗೆ ಯಶ್ ಹಾಗೂ ತಂಡ ಭೇಟಿ ನೀಡಿದ್ದು, ನಂತರ ಧರ್ಮಸ್ಥಳಕ್ಕೆ ತೆರಳಿದರು. ಕೆ.ಜಿ.ಎಫ್ 2 ಸಿನಿಮಾ ಬಿಡುಗಡೆಗೂ ಮುನ್ನ ದೇಶದ ವಿವಿಧೆಡೆ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದ ಯಶ್ ಇಂದು ದೇಗುಲ ದರ್ಶನಕ್ಕೆ ತಮ್ಮ ಸಮಯ ಮೀಸಲಿಟ್ಟಿದ್ದರು. ದೇಗುಲ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್, ಸದಸ್ಯೆ ಶೋಭಾ ಗಿರಿಧರ್,ಎಇ ಒ ಪುಷ್ಪಲತಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಯಶ್ ಹಾಗೂ ತಂಡವನ್ನು ಸ್ವಾಗತಿಸಿ, ಸೂಕ್ತ ವ್ಯವಸ್ಥೆ ಮಾಡಿದರು.

ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಯಶ್ ನಂತರ ರಸ್ತೆ ಮಾರ್ಗವಾಗಿ ಕುಕ್ಕೆಗೆ ಬಂದರು. ಯಶ್ ಜೊತೆಗೆ ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಇದ್ದರು. ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್ ನಂತರ ಧರ್ಮಸ್ಥಳಕ್ಕೆ ತೆರಳಿದರು. ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಶ್ ಮತ್ತು ವಿಜಯ ಕಿರಂಗದೂರು, ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದರು.

ಬಳಿಕ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ‌ಭೇಟಿ ಮಾಡಿದರು. ಹೆಗ್ಗಡೆ ಅವರ ಆಶೀರ್ವಾದ ಪಡೆದ ನಟ ಯಶ್ ಅವರಿಂದ ಸಿನಿಮಾದ ಬಗ್ಗೆ ವೀರೇಂದ್ರ ಹೆಗ್ಗಡೆ ಮಾಹಿತಿ ಪಡೆದು ಶುಭಹಾರೈಕೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕನ್ನಡ, ತೆಲುಗು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಏಪ್ರಿಲ್ 14, 2022 ರಂದು ದೇಶಾದ್ಯಂತ, ವಿದೇಶಗಳಲ್ಲೂ ಚಿತ್ರದ ಕ್ರೇಜ್ ಹೆಚ್ಚಾಗುತ್ತಿದೆ. ಕೆಜಿಎಫ್: ಅಧ್ಯಾಯ 2 ಅನ್ನು ಅತ್ಯಂತ ಬೇಡಿಕೆಯ ನಿರ್ದೇಶಕರಲ್ಲಿ ಒಬ್ಬರಾದ ಪ್ರಶಾಂತ್ ನೀಲ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ

ರಿತೇಶ್ ಸಿಧ್ವಾನಿ ಮತ್ತು ಫರ್ಹಾನ್ ಅಖ್ತರ್ ಅವರ ಎಕ್ಸೆಲ್ ಎಂಟರ್‌ಟೈನ್‌ಮೆಂಟ್ ಮತ್ತು ಎಎ ಫಿಲ್ಮ್ಸ್ ಮೂಲಕ ಚಿತ್ರವನ್ನು ಉತ್ತರಭಾರತದ ಮಾರುಕಟ್ಟೆಗಳಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ದಿಲ್ ಚಾಹತಾ ಹೈ, ಜಿಂದಗಿ ನಾ ಮಿಲೇಗಿ ದೊಬಾರಾ, ದಿಲ್ ಧಡಕ್ನೆ ದೋ, ಮತ್ತು ಗಲ್ಲಿ ಬಾಯ್ ಮುಂತಾದ ಸೂಪರ್ ಹಿಟ್‌ಗಳನ್ನು ಎಕ್ಸೆಲ್ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರಿ ಹುದ್ದೆ ಕಡಿತಕ್ಕೆ ಒತ್ತಾಯ,

Mon Apr 11 , 2022
ಬೆಂಗಳೂರು,ಏ.11- ಆಡಳಿತ ಸುಧಾರಣಾ ಆಯೋಗ ತನ್ನ ವರದಿಯಲ್ಲಿ ಸರ್ಕಾರಿ ಕ್ಷೇತ್ರದಲ್ಲಿನ ಕೆಲ ಹುದ್ದೆಗಳ ರದ್ದತಿಗೆ ಒತ್ತಾಯಿಸಿರುವುದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ. ಈಗ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗಿದ್ದು, ವಿಳಂಬದಿಂದ ನಾಗರಿಕ ಸೇವೆಗಳ ಮೇಲೆ ತೀವ್ರ ಪರಿಣಾಮ ಎದುರಾಗಲಿದೆ. ಸುಮಾರು ಎರಡು ವರ್ಷಗಳ ನಂತರ ಇಲಾಖೆಗಳಲ್ಲಿ ಖಾಲಿಯಿರುವ ಅನೇಕ ಹುದ್ದೆಗಳ ಭರ್ತಿಗಾಗಿ ರಾಜ್ಯ ಸರ್ಕಾರ ನೇಮಕಾತಿಯನ್ನು ಆರಂಭಿಸಿತ್ತು. ಕೊರೊನಾ ಸಾಂಕ್ರಾಮಿಕ ಆದಾಯ ಸಂಗ್ರಹದಲ್ಲಿ ಬೀರಿದ ಪರಿಣಾಮ ಸೇರಿದಂತೆ […]

Advertisement

Wordpress Social Share Plugin powered by Ultimatelysocial