ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ: ಕೆ ಎಸ್ ಈಶ್ವರಪ್ಪ!

ಮೈಸೂರು : ಬಿ.ಎಸ್ ಯಡಿಯೂರಪ್ಪ-ಬಸವರಾಜ ಬೊಮ್ಮಾಯಿ ಅಣ್ಣ ತಮ್ಮನಂತೆ ಇದ್ದಾರೆ. ಷಡಕ್ಷರಿಯನ್ನು ಯಡಿಯೂರಪ್ಪ ಎತ್ತಿಕಟ್ಟಿದ್ದಾರೆ ಎನ್ನೋದು ಕುತಂತ್ರ ಎಂದು ಕಾಂಗ್ರೆಸ್ ಟ್ವೀಟ್‌’ಗೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌’ನಲ್ಲಿ ಸಿಎಂ ಹುದ್ದೆಗಾಗಿ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ನಡುವೆ ಕಿತ್ತಾಟ ಇದೆ.

ಅದೇ ರೀತಿ ಬಿಜೆಪಿಯವರೂ ಕಿತ್ತಾಡಲಿ ಎಂದು ಬಯಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಸರ್ಕಾರಿ ನೌಕರರಿಗೆ ಬಿಜೆಪಿಯವರು ನೀಡಿದಷ್ಟು ಸೌಲಭ್ಯವನ್ನು ಬೇರೆ ಯಾರೂ ನೀಡಲಿಲ್ಲ. ಹೀಗಿದ್ದರೂ ಮುಷ್ಕರ ಮಾಡುತ್ತೇವೆ ಎಂದರೆ ಏನು ಹೇಳೋದು? ಎಂದು ಪ್ರಶ್ನಿಸಿದರು.

ರಾಜ್ಯದ ಒಂದು ಪಕ್ಷದ ಅಧ್ಯಕ್ಷನಾಗಿ ಗಂಡಸ್ತನ ಅಂದ್ರೇ ಏನು ಅಂತ ಇಬ್ರಾಹಿಂಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ದೇಶ ರಕ್ಷಿಸುವ ಪ್ರಭಾವಿ ನಾಯಕರು ಬಿಜೆಪಿಯಲ್ಲಿದ್ದಾರೆ

ಜನಮೆಚ್ಚಿದ, ದೇಶವನ್ನು ರಕ್ಷಣೆ ಮಾಡುವ ಪ್ರಭಾವಿ ನಾಯಕರು ಬಿಜೆಪಿಯಲ್ಲಿದ್ದಾರೆ. ಕಾಂಗ್ರೆಸ್ ನಲ್ಲಿ, ಜೆಡಿಎಸ್ ನಲ್ಲಿ ಇಲ್ಲ. ಮೋದಿ, ಅಮಿತ್ ಶಾ ದೇಶದ ಜನರ ಮನಸು ಗೆದ್ದಿರುವ ನಾಯಕರು. ಅವರುಗಳನ್ನು ನಾವು ಕರೆಸುತ್ತೇವೆ. ನೀವು ಸಹ ಯಾರನ್ನು ಬೇಕಾದರೂ ಕರೆಸಿಕೊಳ್ಳಿ. ಬಿಜೆಪಿಯಲ್ಲಿ ರಾಜ್ಯದಲ್ಲೂ, ರಾಷ್ಟ್ರದಲ್ಲೂ ನಾಯಕರಿದ್ದಾರೆ. ಕಾಂಗ್ರೆಸ್ ನಲ್ಲಿ ಎರಡು‌ ಕಡೆಯೂ ನಾಯಕರಿಲ್ಲ. ಇದರಿಂದ ಇಷ್ಟು ಚುನಾವಣೆ ಸೋತಿದ್ದಾರೆ ಎಂದು ಹರಿಹಾಯ್ದರು.

ಸಚಿವ ಸ್ಥಾನ ನೀಡುವುದು ಹಾಗೂ ಟಿಕೆಟ್ ನೀಡುವುದು ಬಿಡುವುದು ಪಕ್ಷದ ತೀರ್ಮಾನ. ಎಲ್ಲರೂ ಮಂತ್ರಿಗಳು ಆಗಬೇಕೆಂದು ಬರೆದುಕೊಟ್ಟಿಲ್ಲ. 224 ಕ್ಷೇತ್ರಗಳ ಎಲ್ಲರೂ ಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಗೆಲ್ಲುವ ಸಾಮರ್ಥ್ಯ ಇರುವವರಿಗೆ ಟಿಕೆಟ್

ಟಿಕೆಟ್ ‌ನೀಡುವ ವಿಚಾರದಲ್ಲಿ ಕೇಂದ್ರ ರಾಜ್ಯದ ನಾಯಕರು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. 150 ಸೀಟು ಗೆಲ್ಲೋದು ನಮ್ಮ ಮುಖ್ಯ ಉದ್ದೇಶ. ಯಾರು ಸ್ಪರ್ಧೆ ಮಾಡ್ತಾರೆ ಎನ್ನೋದು ಮುಖ್ಯವಲ್ಲ‌. ಪಕ್ಷವನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದು ನಮ್ಮ ಗುರಿಯಾಗಿದೆ. ಎಲ್ಲಾ ತೀರ್ಮಾನ ಪಕ್ಷಕ್ಕೆ ಬಿಟ್ಟಿದ್ದು. ನಮ್ಮದು ಸಂಘಟನೆ ಆಧಾರಿತ ಪಕ್ಷವಾಗಿದೆ‌. ಚೇಲಾ, ಚಮಚಗಿರಿ, ಜಾತಿ, ದುಡ್ಡು ನಮ್ಮಲ್ಲಿ ನಡೆಯಲ್ಲ. ಕಾಂಗ್ರೆಸ್ ಜೆಡಿಎಸ್ ನಲ್ಲಿರುವ ಪರಿಸ್ಥಿತಿ ನಮ್ಮಲ್ಲಿಲ್ಲ. ಗೆಲ್ಲುವ ಸಾಮರ್ಥ್ಯ ಇರುವವರನ್ನು ಗುರ್ತಿಸಿ ಪಕ್ಷ ಟಿಕೆಟ್ ನೀಡಲಿದೆ ಎಂದು ಹೇಳಿದರು.

ನಾಳೆಯಿಂದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ

ನಾಳೆಯಿಂದ ನಾಲ್ಕು ತಂಡಗಳಲ್ಲಿ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆ ಆರಂಭವಾಗಲಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಹೊರಡುವ ವಿಜಯಸಂಕಲ್ಪ ರಥಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚಾಲನೆ ನೀಡಲಿದ್ದಾರೆ. ನಾನು, ಕೋಟಾ ಶ್ರೀನಿವಾಸಪೂಜಾರಿ, ಅರಗ ಜ್ಞಾನೇಂದ್ರ, ವಿ ಸೋಮಣ್ಣ ಸೇರಿದಂತೆ ಇತರ ಪ್ರಮುಖ ನಾಯಕರು ಇರುತ್ತಾರೆ ಎಂದು ಮಾಹಿತಿ ನೀಡಿದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು

Wed Mar 1 , 2023
ವಯಸ್ಸಾದಂತೆ, ನಮ್ಮ ಕಣ್ಣುಗಳ ದೃಷ್ಟಿ ಕಡಿಮೆಯಾಗುತ್ತಾ ಹೋಗುತ್ತದೆ. 40 ವರ್ಷ ವಯಸ್ಸಿನ ನಂತರ ಉತ್ತಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳು ಇಲ್ಲಿವೆ. ನಿಯಮಿತ ಕಣ್ಣಿನ ಪರೀಕ್ಷೆಗಳು: ನಿಮ್ಮ ಕಣ್ಣುಗಳನ್ನು ನಿಯಮಿತವಾಗಿ, ಕನಿಷ್ಠ ವರ್ಷಕ್ಕೊಮ್ಮೆ, ಕಣ್ಣಿನ ಆರೈಕೆ ವೃತ್ತಿಪರರಿಂದ ಪರೀಕ್ಷಿಸುವುದು ಅತ್ಯಗತ್ಯ. ಇದು ವಯಸ್ಸಿಗೆ ಸಂಬಂಧಿಸಿದ ಯಾವುದೇ ಕಣ್ಣಿನ ಸಮಸ್ಯೆಗಳನ್ನು ಮೊದಲೇ ಪತ್ತೆ ಹಚ್ಚಲು ಮತ್ತು ಹೆಚ್ಚಿನ ಹಾನಿಯನ್ನು ತಡೆಯಲು ಸಹಾಯ ಮಾಡುತ್ತದೆ. ದೀರ್ಘಕಾಲದ ಆರೋಗ್ಯ ಪರಿಸ್ಥಿತಿಗಳನ್ನು ನಿರ್ವಹಿಸಿ: ಮಧುಮೇಹ, ಅಧಿಕ […]

Advertisement

Wordpress Social Share Plugin powered by Ultimatelysocial