ವಿಮಾನ ನಿಲ್ದಾಣ’ಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ   ಕಾಮಗಾರಿ ವೀಕ್ಷಣೆಯ ಬಳಿಕ, ಈ ನಿಲ್ದಾಮಕ್ಕೆ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನು ಇಡುತ್ತಿರೋದಾಗಿ ಘೋಷಣೆ ಮಾಡಿದ್ದರು.

ಇದೀಗ ನನ್ನ ಹೆಸರು ಇಡೋದು ಬೇಡ ಎಂಬುದಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ.

ಈ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವಂತ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ  ಅವರು, ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚಿಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದ ಎಂದು ತಿಳಿಸಿದ್ದಾರೆ.

ಮುಂದುವರೆದು, ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು, ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾ ನನ್ನದೊಂದು ಅಳಿಲು ಸೇವೆ ಮಾತ್ರವಾಗಿದೆ. ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾ ಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಎಲ್ಲಾ ಕಾರಣದಿಂದ ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಪತ್ರದಲ್ಲಿ ಸಿಎಂ ಬೊಮ್ಮಾಯಿಯವರನ್ನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೋರಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪಂಚಾಯತ್ಗಳು ಭಾರತದ ಪ್ರಜಾಪ್ರಭುತ್ವದ ಮೂಲ ಸ್ತಂಭ: ಪ್ರಧಾನಿ ಮೋದಿ

Sun Apr 24 , 2022
ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು, ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಪಂಚಾಯತ್‌ಗಳು ಭಾರತೀಯ ಪ್ರಜಾಪ್ರಭುತ್ವದ ಮೂಲ ಸ್ತಂಭವಾಗಿದ್ದು, ಅದರ ಶಕ್ತಿಯಲ್ಲಿ ನವ ಭಾರತದ ಸಮೃದ್ಧಿ ಇದೆ ಎಂದು ಹೇಳಿದರು. ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಿರುವ ಸಾಂವಿಧಾನಿಕ ಸ್ಥಾನಮಾನವನ್ನು ಆಚರಿಸಲು ಏಪ್ರಿಲ್ 24 ಅನ್ನು ಪಂಚಾಯತ್ ರಾಜ್ ಸಚಿವಾಲಯವು ಪ್ರತಿ ವರ್ಷ ರಾಷ್ಟ್ರೀಯ ಪಂಚಾಯತ್ ರಾಜ್ ದಿನವಾಗಿ (NPRD) ಆಚರಿಸುತ್ತದೆ. “ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ನಿಮಗೆಲ್ಲರಿಗೂ ಶುಭಾಶಯಗಳು. ಪಂಚಾಯತ್‌ಗಳು […]

Advertisement

Wordpress Social Share Plugin powered by Ultimatelysocial