ಮೇ 3ರಂದು ನೃಪತುಂಗ ವಿವಿ ಉದ್ಘಾಟನೆ,ಅಮಿತ್ ಶಾ ಆಗಮನ ಶೈಕ್ಷಣಿಕ ಸಮುಚ್ಚಯ ನಿರ್ಮಾಣಕ್ಕೆ ಶಂಕುಸ್ಥಾಪನೆ!

ಬೆಂಗಳೂರು: ಕೇಂದ್ರ ಸರಕಾರದ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇದೇ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿ.ವಿ.ದ ಶೈಕ್ಷಣಿಕ ಸಮುಚ್ಚಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ಮೇ 3ರ ಕಾರ್ಯಕ್ರಮಕ್ಕೆ ನಡೆದಿರುವ ಸಿದ್ಧತೆಗಳನ್ನು ಭಾನುವಾರ ಪರಿಶೀಲಿಸಿದ ಅವರು, `ನೃಪತುಂಗ ವಿವಿ ಉದ್ಘಾಟನೆ ಕಾರ್ಯಕ್ರಮವನ್ನು ಚಾರಿತ್ರಿಕ ಸಮಾರಂಭವನ್ನಾಗಿ ಮಾಡಿ, ಸ್ಮರಣೀಯಗೊಳಿಸಲಾಗುವುದು. ಸರಕಾರಿ ಕಲಾ ಕಾಲೇಜಿನ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ 5 ಸಾವಿರ ಜನ  ಭಾಗವಹಿಸಲಿದ್ದಾರೆ’ ಎಂದರು.

ಮೈಸೂರಿನ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 100 ವರ್ಷಗಳ ಹಿಂದೆ (1921ರಲ್ಲಿ) ಸ್ಥಾಪಿಸಿದ ಈ ಸಂಸ್ಥೆಯು ಹಂತಹಂತವಾಗಿ ಬೆಳೆದು ಬಂದಿದೆ. ಈಗ ಪೂರ್ಣ ವಿಶ್ವವಿದ್ಯಾಲಯದ ರೂಪವನ್ನು ಪಡೆಯುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿರುವ ಬಿಜೆಪಿ ಸರಕಾರಗಳು ಶೈಕ್ಷಣಿಕ ಕ್ರಾಂತಿ ಮಾಡಲು ಸಂಕಲ್ಪ ಮಾಡಿರುವುದರ ಫಲವಿದು’ ಎಂದು ಅವರು ಹೇಳಿದರು.

ನೃಪತುಂಗ ವಿ.ವಿ.ದಲ್ಲಿ ಬಿ.ಎಸ್ಸಿ ಮತ್ತು ಬಿಸಿಎ ಪದವಿಗಳಡಿ 24 ಕೋರ್ಸುಗಳು, 7 ಸ್ನಾತಕೋತ್ತರ ಶಿಸ್ತುಗಳು ಮತ್ತು 3 ಸಂಶೋಧನಾ ಕೇಂದ್ರಗಳು ಇರಲಿವೆ. ಈ ವಿ.ವಿ.ಗೆ ಕೇಂದ್ರ ಸರಕಾರವು 55 ಕೋಟಿ ರೂ.ಗಳಷ್ಟು ಅನುದಾನವನ್ನು ಮಂಜೂರು ಮಾಡಿದೆ. ಈ ಮೂಲಕ ನೃಪತುಂಗ ವಿ.ವಿ.ವನ್ನು ಜಾಗತಿಕ ಗುಣಮಟ್ಟದ ಸಂಸ್ಥೆಯಾಗಿ ರೂಪಿಸಲಾಗುವುದು ಎಂದು ಸಚಿವರು ವಿವರಿಸಿದರು.

ಭಾರತವನ್ನು ಜ್ಞಾನದ ರಾಜಧಾನಿಯನ್ನಾಗಿ ಮಾಡಬೇಕೆಂಬ ಮಹತ್ತ್ವಾಕಾಂಕ್ಷೆಯಿಂದ ಪ್ರಧಾನಿ ಮೋದಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಇದರಲ್ಲಿ ಪಠ್ಯದ ಕಲಿಕೆಯ ಜತೆಗೆ ಕೌಶಲ್ಯಾಭಿವೃದ್ಧಿಗೂ ಆದ್ಯ ಗಮನ ಕೊಡಲಾಗಿದೆ. ಸಮಕಾಲೀನ ಅಗತ್ಯಗಳಿಗೆ ತಕ್ಕಂತೆ ನೃಪತುಂಗ ವಿ.ವಿ. ತನ್ನ ಶೈಕ್ಷಣಿಕ ಕಾರ್ಯಕ್ರಮಗಳನ್ನು ರೂಪಿಸಿಕೊಂಡು, ಮುಂದಡಿ ಇಡಲಿದೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ನೃಪತುಂಗ ವಿವಿ ಕುಲಪತಿ ಶ್ರೀನಿವಾಸ ಬಳ್ಳಿ, ಕುಲಸಚಿವ ರಾಮಕೃಷ್ಣ ರೆಡ್ಡಿ ಸೇರಿದಂತೆ ಸಿಬ್ಬಂದಿ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ವಿದ್ಯುತ್ ಶಾರ್ಟ್ ಸರ್ಕ್ಯುಟ್ ನಿಂದ ಬಾಳೆ ತೋಟಕ್ಕೆ ಬೆಂಕಿ...!

Mon May 2 , 2022
ಶಾರ್ಟ್ ಸರ್ಕ್ಯೂಟ್ ನಿಂದ ಬಿದ್ದ ಬೆಂಕಿ ಕಿಡಿಯಿಂದ ಸುಟ್ಡು ಕರಕಲಾದ ಬಾಳೆ ತೋಟ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದಲ್ಲಿ ಘಟನೆ. ಬಾಪುಗೌಡ ಪಾಟೀಲ್ ಎಂಬುವವರಿಗೆ ಸೇರಿದ ನಾಲ್ಕು ಎಕರೆ ಬಾಳೆ ತೋಟ. ಕಟಾವಿಗೆ ಬಂದಿದ್ದ ನಾಲ್ಕೈದು ಲಕ್ಷ ರೂಪಾಯಿ‌ ಮೌಲ್ಯದ ಫಸಲು‌ ಬೆಂಕಿಗೆ ಆಹುತಿ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ.ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ […]

Advertisement

Wordpress Social Share Plugin powered by Ultimatelysocial