ಮರೆಯಲಾಗದ ರುಚಿ ಚಿಕನ್ ಲಿವರ್ ಡ್ರೈ

ಅಡುಗೆಯಲ್ಲಿ, ವಿಶೇಷವಾಗಿ ಮಾಡುವ ಅಡುಗೆ ಮಾಂಸದ ಅಡುಗೆಯಾಗಿದೆ.
ನಾವು ಅಡುಗೆ ಮಾಡಲು ಬಳಸುವ ಪದಾರ್ಥಗಳು ಹಿಡಿತದಲ್ಲಿದ್ದಾಗ ಮಾತ್ರ ಅಡುಗೆ ರುಚಿಯಾಗಿ ಆಗುತ್ತದೆ.

ನಾವು ಇಂದು ಖಾರವಾದ ಅಡುಗೆ ತಿನ್ನಲು ಬಯಸುವವರಿಗಾಗಿ ರುಚಿಯಾದ ಖಾರವಾದ ಚಿಕನ್ ಲಿವರ್ ಡ್ರೈ ಮಾಡುವ ವಿಧಾನ ಹೇಳುತ್ತಿದ್ದೇವೆ

ಬೇಕಾಗುವ ಸಾಮಗ್ರಿಗಳು
* ಚಿಕನ್ ಲಿವರ್- ಅರ್ಧ ಕೆಜಿ
* ಈರುಳ್ಳಿ-3
* ಟೊಮೆಟೊ- 1
* ಹಸಿಮೆಣಸಿನಕಾಯಿ -4
* ಕರಿಬೇವು – ಸ್ವಲ್ಪ,
* ಶುಂಠಿ-ಬೆಳ್ಳುಳ್ಳಿ ಪೇಸ್ಟ್ – 1 ಚಮಚ
* ಕಾಳುಮೆಣಸಿನಪುಡಿ – 1 ಚಮಚ,
* ಕೆಂಪು ಮೆಣಸಿನಕಾಯಿಪುಡಿ -1 ಚಮಚ
* ದನಿಯಾ ಪುಡಿ- 1 ಚಮಚ
* ರುಚಿಗೆ ತಕ್ಕಷ್ಟು ಉಪ್ಪು
* ಅರಿಸಿಣ- ಸ್ವಲ್ಪ
* ಕೊತ್ತಂಬರಿ ಸೊಪ್ಪು – ಸ್ವಲ್ಪ
* ಅಡುಗೆ ಎಣ್ಣೆ- ಅರ್ಧ ಕಪ್

ಮಾಡುವ ವಿಧಾನ
* ಒಂದು ಬಾಣಲೆಯನ್ನು ಬಿಸಿಗಿಟ್ಟು, ಅಡುಗೆ ಎಣ್ಣೆ ಹಾಕಿ ಅದಕ್ಕೆ ಈರುಳ್ಳಿ, ಟೊಮೆಟೊ, ಹಸಿಮೆಣಸಿನಕಾಯಿ, ಕರಿಬೇವು ಸೇರಿಸಿ ಚೆನ್ನಾಗಿ ಹುರಿದುಕೊಳ್ಳಿ.

* ನಂತರ ಚಿಕನ್ ಲಿವರ್ ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು, ಅರಿಸಿಣ, ಕೆಂಪುಮೆಣಸಿನ ಪುಡಿ, ಕೊತ್ತಂಬರಿ ಪುಡಿ ಹಾಕಿ ಚಿಕನ್ ಲಿವರ್ ಅನ್ನು ಬೇಯಿಸಿಕೊಳ್ಳಿ.

* ನೀರು ಸೇರಿಸುವ ಅವಶ್ಯಕತೆ ಇಲ್ಲ. ಲಿವರ್ ಬೆಂದ ನಂತರ ಕಾಳುಮೆಣಸಿನ ಪುಡಿ, ಗರಂಮಸಾಲೆ ಸೇರಿಸಿ ಮತ್ತೆ ಬೇಯಿಸಿ ಕೊನೆಯದಾಗಿ ಕೊತ್ತಂಬರಿಯನ್ನು ಹಾಕಿದರೆ ಚಿಕನ್ ಲಿವರ್ ಡ್ರೈ ಸಿದ್ಧವಾಗುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರುಚಿಕರವಾದ ಎಗ್ ಫ್ರೈಡ್ ರೈಸ್

Tue Dec 21 , 2021
ಬೀದಿ ಬದಿಯ ಅಂಗಡಿಯಲ್ಲಿ ಚಳಿಗಾಲದಲ್ಲಿ ಎಗ್ ಫ್ರೈಡ್ ರೈಸ್ ಸವಿಯುವ ಮಜವೇ ಬೇರೆ ಎಂದು ಆಹಾರ ಪ್ರಿಯರು ಹೇಳುತ್ತಾರೆ. ಆದರೆ ಇದನ್ನು ಮನೆಯಲ್ಲೇ ಮಾಡಿ ಸವಿಯುವುದು ಇನ್ನೂ ಚೆನ್ನಾಗಿರುತ್ತದೆ. ಎಗ್ ಫ್ರೈಡ್ ರೈಸ್ ಮಾಡುವುದು ಸುಲಭವಾಗಿದೆ. ಅದಕ್ಕೆ ಹೆಚ್ಚಿನ ಸಮಯ, ಪರಿಶ್ರಮವೂ ಅಗತ್ಯವಿಲ್ಲ. ನಾನ್ವೆಜ್ ಅಡುಗೆಯಲ್ಲಿ ಹೊಸ ಪ್ರಯತ್ನ ಮಾಡುವವರಿಗೂ ಇದು ಕಷ್ಟವೆನಿಸುವುದಿಲ್ಲ. ಈ ವಿಧಾನವನ್ನು ಅನುಸರಿಸಿ ಮನೆಯಲ್ಲೇ ಎಗ್ ಫ್ರೈಡ್ ರೈಸ್ ಮಾಡಿ, ಅದರ ರುಚಿ ಸವಿದು ಎಂಜಾಯ್ […]

Advertisement

Wordpress Social Share Plugin powered by Ultimatelysocial