CRICKET:ವಿರಾಟ್ ಕೊಹ್ಲಿ ಬಗ್ಗೆ ಕುತೂಹಲಕಾರಿ ಹೇಳಿಕೆ ನೀಡಿದ ಶಾಹಿದ್ ;

ಪಾಕಿಸ್ತಾನ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಸೋಲು ಕಂಡ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೂ ವಿದಾಯ ಹೇಳಿದ್ದಾರೆ. ಟಿ20 ಹಾಗೂ ಏಕದಿನ ಮಾದರಿಯ ನಾಯಕತ್ವದಿಂದ ಕೆಳಗಿಳಿದ ಬಳಿಕ ಟೆಸ್ಟ್ ಮಾದರಿಗೂ ವಿರಾಟ್ ಕೊಹ್ಲಿ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ಅಚ್ಚರಿಯುಂಟು ಮಾಡಿದೆ.

ವಿರಾಟ್ ಕೊಹ್ಲಿಯ ಈ ನಿರ್ಧಾರದ ಬಗ್ಗೆ ಇದೀಗ ನಾನಾ ರೀತಿಯ ಚರ್ಚೆಗಳು ನಡೆಯುತ್ತಿದೆ. ಕ್ರಿಕೆಟ್ ಅಭಿಮಾನಿಗಳು ಹಾಗೂ ಕ್ರಿಕೆಟ್ ವಿಶ್ಲೇಷಕರು ಈ ಬಗ್ಗೆ ತಮ್ಮದೇ ಆದ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಟೀಮ್ ಇಂಡಿಯಾ ನಾಯಕ ಸ್ಥಾನಕ್ಕೆ ವಿರಾಟ್ ಕೊಹ್ಲಿ ರಾಜೀನಾಮೆ ನೀಡಿದ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಕೂಡ ವಿರಾಟ್ ಕೊಹ್ಲಿ ನಾಯಕತ್ವ ತೊರೆದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪಾಕಿಸ್ತಾನದ ಸಾಮಾ ಟಿವಿ ಜೊತೆಗೆ ಮಾತನಾಡಿದ ಸಂದರ್ಭದಲ್ಲಿ ಶಾಹಿದ್ ಅಫ್ರಿದಿ ಪ್ರತಿಕ್ರಿಯಿಸಿದ್ದಾರೆ. ಈ ಸಂದರ್ಭದಲ್ಲಿ ಅವರು “ಒಂದು ಹಂತದಲ್ಲಿ ಒತ್ತಡಗಳನ್ನು ತಡೆದುಕೊಳ್ಳಲಾಗದ ಸಂದರ್ಭ ಬರುತ್ತದೆ. ಆ ಸಂದರ್ಭದಲ್ಲಿ ಅದು ಆಟಗಾರರ ಪ್ರದರ್ಶನದ ಮೇಲೂ ಪ್ರಭಾವ ಬೀರುತ್ತದೆ” ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಶಾಹಿದ್ ಅಫ್ರಿದಿ ವಿರಾಟ್ ಕೊಹ್ಲಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. “ವಿರಾಟ್ ಕೊಹ್ಲಿ ಭಾರತ ತಂಡವನ್ನು ದೀರ್ಘಕಾಲದವರೆಗೆ ಅತ್ಯುತ್ತಮ ಮಟ್ಟದಲ್ಲಿ ನಾಯಕತ್ವ ವಹಿಸಿದ್ದಾರೆ. ಆದರೆ ಈಗ ಅವರು ತಮ್ಮ ಕ್ರಿಕೆಟ್ ಅನ್ನು ಆನಂದಿಸುವ ಸಮಯವೆಂದು ಹೇಳಿವ ಮೂಲಕ” ಶಾಹಿದ್ ಅಫ್ರಿದಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೃಷಿ ಕ್ಷೇತ್ರವು ಕೇಂದ್ರ ಬಜೆಟ್​ 2022ರಿಂದ ನಿರೀಕ್ಷೆ ಮಾಡುತ್ತಿರುವ ಪ್ರಮುಖ ಅಂಶವೇನು?

Tue Jan 18 , 2022
ರೈತರ ಆದಾಯ ಹೆಚ್ಚು ಮಾಡುವ ನಿಟ್ಟಿನಲ್ಲಿ ಏನೆಲ್ಲ ಮಾಡಬಹುದು ಎಂಬ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಕಳೆದ ವರ್ಷ ಕೊನೆಯಲ್ಲಿ ಕೃಷಿ ಕಾನೂನು ತಿದ್ದುಪಡಿ ಹಿಂಪಡೆದ ನಂತರವೂ ಕೃಷಿ ವಲಯದ ಅಭಿವೃದ್ಧಿಗಾಗಿ ಹಲವು ಯೋಜನೆ ತರುವ, ಉತ್ತೇಜನ ನೀಡುವ ನಿರೀಕ್ಷೆ ಕಾಣುತ್ತಿದೆ. ಕೃಷಿ ವಲಯದಲ್ಲಿ ಕೃಷಿ ಆಧಾರಿತ ಉತ್ಪನ್ನಗಳನ್ನು ಪ್ರೋತ್ಸಾಹಿಸಿ ಕಾರ್ಯತಂತ್ರ ರೂಪಿಸುವುದು ಸರ್ಕಾರದ ಯೋಜನೆ ಆಗಿದೆ ಎನ್ನುತ್ತಾರೆ ಅಧಿಕಾರಿಗಳು. ಈ ಸಂಬಂಧವಾಗಿ ಫೆಬ್ರವರಿ 1ನೇ ತಾರೀಕಿನಂದು ಕೇಂದ್ರ ಬಜೆಟ್​ನಲ್ಲಿ […]

Advertisement

Wordpress Social Share Plugin powered by Ultimatelysocial