ಜಮೀರ್ ಅಹಮ್ಮದ್ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು.!

ಬೆಂಗಳೂರು: ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ‌ ಬಿ.ಜೆಡ್.‌ ಜಮೀರ್ ಅಹಮ್ಮದ್ ಖಾನ್ ಅವರ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಮಂಗಳವಾರ ಪ್ರತಿಭಟನೆ ನಡೆಸಿದರು.

ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಸಮೀಪದಲ್ಲಿರುವ ಜಮೀರ್ ನಿವಾಸದಲ್ಲಿ ಎಸಿಬಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.

ಮನೆಯ ಮುಂದೆ ಸೇರಿರುವ ಅವರ ಬೆಂಬಲಿಗರು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

‘ಜಮೀರ್ ಅಹಮ್ಮದ್ ಅವರು ಜನಪರವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅವರಿಗೆ ರಾಜಕೀಯ ದುರುದ್ದೇಶದಿಂದ ಕಿರುಕುಳ ನೀಡುತ್ತಿವೆ. ಹಿಂದೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಈಗ ಎಸಿಬಿ ದಾಳಿ ನಡೆದಿದೆ. ಇದರ ಹಿಂದೆ ರಾಜಕೀಯವಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ತಮ್ಮ ಆಪ್ತರ ಪಟ್ಟಿಯಲ್ಲಿ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಇದ್ದಾರಾ ?

Tue Jul 5 , 2022
  ಬೆಂಗಳೂರು: ತಮ್ಮ ಆಪ್ತರ ಪಟ್ಟಿಯಲ್ಲಿ‌ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಇದ್ದಾರಾ ? ಎಂಬ ಮಾಧ್ಯಮದ ಪ್ರಶ್ನೆಗೆ ಕೊನೆಗೂ ಉತ್ತರ ನೀಡದೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅಚ್ಚರಿ ಮೂಡಿಸಿದರು. ರಾಜ್ಯ ಸರಕಾರದ ವಿರುದ್ಧ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯನವರಿಗೆ ಈ ” ಆಪ್ತ” ಪ್ರಶ್ನೆ ಎದುರಾಯಿತು. ನಿಮ್ಮ ಆಪ್ತ ಶಾಸಕ‌ ಜಮೀರ್ ಅಹ್ಮದ್ ವಿರುದ್ಧ ಎಸಿಬಿ ದಾಳಿ ನಡೆಸಿ ಪಿಎಸ್ ಐ ಹಗರಣ ಮುಚ್ಚಿ ಹಾಕಲು ಪ್ರಯತ್ನಿಸುತ್ತಿದೆಯಾ? ಎಂಬ […]

Advertisement

Wordpress Social Share Plugin powered by Ultimatelysocial