24 ಜೀವಂತ ಗುಂಡು ಪತ್ತೆಯಾಗಿದೆ. ಜಮೀರ್ ಅಹಮ್ಮದ್ ಪಿಸ್ತೂಲ್ ಪರವಾನಗಿ ಹೊಂದಿದ್ದಾರೆ.!

ಬೆಂಗಳೂರು (ಜು.07): ಎಸಿಬಿ ಅಧಿಕಾರಿಗಳು ಸಿಲ್ವರ್ ಓಕ್ ಅಪಾರ್ಟ್​ಮೆಂಟ್​ನ ಫ್ಲ್ಯಾಟ್ ಮೇಲೆ ದಾಳಿ ನಡೆಸಿದ್ಧಾರೆ. ಮಲ್ಯ ರಸ್ತೆಯ UB ಸಿಟಿ ಎದುರಿನ ಫ್ಲ್ಯಾಟ್ ಮೇಲೆ ರೇಡ್ ನಡೆಸಿದ್ದಾರೆ. ನಾಲ್ಕನೇ ಪ್ಲೋರ್​ನ 402ನೇ ಫ್ಲ್ಯಾಟ್​ನಲ್ಲಿ ಪರಿಶೀಲನೆ ನಡೆದಿದೆ.
ಮನೆ, ಟ್ರಾವೆಲ್ಸ್​ ಕಚೇರಿ, ಫ್ಲ್ಯಾಟ್​ನಲ್ಲಿ ಅಧಿಕಾರಿಗಳ ಶೋಧ ನಡೆಸಿದ್ದಾರೆ. ಫ್ಲ್ಯಾಟ್​ನಲ್ಲಿ 24 ಜೀವಂತ ಗುಂಡು ಪತ್ತೆಯಾಗಿದೆ. ಜಮೀರ್ ಅಹಮ್ಮದ್ಪಿ ಸ್ತೂಲ್ ಪರವಾನಗಿ ಹೊಂದಿದ್ದಾರೆ. ಹಾಗಾಗಿ ಇದೇ ಪಿಸ್ತೂಲ್ ನ ಗುಂಡುಗಳು ಇರಬಹುದು. ಆದರೆ ಇದೇ ಫ್ಲಾಟ್ ನಲ್ಲಿ   ಪತ್ತೆಯಾಗಿದ್ದು, ಇದು ಕುತೂಹಲಕ್ಕೆ ಕಾರಣವಾಗಿದೆ. ಪಿಸ್ತೂಲ್ ನಿಂದ ಗುಂಡು ಹಾರಿದ್ರೆ ಮಾತ್ರ ಈ  ಉಳಿಯುತ್ತದೆ.
ಬೇರೆಯವರ ಹೆಸರಲ್ಲಿ ದಾಖಲೆಗಳು ಪತ್ತೆ
ಯುಬಿ ಸಿಟಿ ಫ್ಲಾಟ್ ನಲ್ಲಿ ಪತ್ತೆಯಾಗಿದೆ 30ಕ್ಕೂ ಅಧಿಕ ಡಾಕ್ಯುಮೆಂಟ್ಸ್, ಬೇನಾಮಿ ದಾಖಲೆ ಪತ್ರ ಆಗಿರುವ ಸಾಧ್ಯತೆ ಇದೆ. ಯಾಕಂದ್ರೆ ಈ ಎಲ್ಲಾ ದಾಖಲೆಗಳು ಬೇರೆಯವರ ಹೆಸರಿನಲ್ಲಿ ಇವೆ. ಸೇಲ್ ಡೀಡ್, ಸೇಲ್ ಅಗ್ರಿಮೆಂಟ್ ಡಾಕ್ಯುಮೆಂಟ್ಸ್ ಪತ್ತೆಯಾಗಿದೆ. ಬೇರೆಯವರ ಹೆಸರಿನ ದಾಖಲೆಗಳು ಪತ್ತೆಯಾಗಿದೆ. ರಾಜಕಾರಣಿಗಳು ಸೇರಿ ಹಲವರ ಹೆಸರಿನ ದಾಖಲೆಗಳು ಪತ್ತೆಯಾಗಿದ್ದು, ಎಸಿಬಿ ಅಧಿಕಾರಿಗಳು ಫ್ಲ್ಯಾಟ್​ನಲ್ಲಿ ಯಾಕಿಷ್ಟು ದಾಖಲೆ ಇಟ್ಟಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ.
ಜಮೀನಿನ ದಾಖಲೆಗಳು ನಾಪತ್ತೆ
ಆನೇಕಲ್, ತುಮಕೂರು, ಹೆಬ್ಬಾಳ ಸೇರಿದಂತೆ ವಿವಿಧ ಕಡೆಗಳಲ್ಲಿ ಇರುವ ಎಕರೆಗಟ್ಟಲೆ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದೆ. ಕೋಟ್ಯಾಂತರ ಮೌಲ್ಯದ ಬೇನಾಮಿ ಹೆಸರಿನಲ್ಲಿ ದಾಖಲೆಗಳು ಇರೋ‌ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಮಧ್ಯೆ ಪೈಪೋಟಿ

Tue Jul 5 , 2022
ಗದಗ : ಕಾಂಗ್ರೆಸ್ ನಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರ ಮಧ್ಯೆ ಪೈಪೋಟಿ ರಾಜಕಾರಣ ನಡೆಯುತ್ತಿದ್ದು, ಕೆಜಿಎಫ್ ಚಾಪ್ಟರ್1, ಚಾಪ್ಟರ್ 2ರ ಮಾದರಿಯಲ್ಲಿ ರಾಕಿ ವರ್ಸಸ್ ರಾಕಿ ಫೈಟ್ ಜೋರಾಗಿದೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಲೇವಡಿ ಮಾಡಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬರು ಸಾಮೂಹಿಕ ನಾಯಕತ್ವ ಎಂದು ಹೇಳುತ್ತಿದ್ದರೆ, ಮತ್ತೊಬ್ಬರು ಶಕ್ತಿ ಪ್ರದರ್ಶನ ಎನ್ನುತ್ತಿದ್ದಾರೆ, ಮತ್ತೆ ಕೆಲವರು ಸಿದ್ದರಾಮ […]

Advertisement

Wordpress Social Share Plugin powered by Ultimatelysocial