ಜಮೀರ್​ ಅಹಮ್ಮದ್ ಮನೆಗೆ 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ

ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆ ಕಾಂಗ್ರೆಸ್​ ಶಾಸಕ ಜಮೀರ್​ ಅಹಮ್ಮದ್​ ಖಾನ್​ ಅವರ ಮನೆ ಹಾಗೂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಗುರುವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. 40ಕ್ಕೂ ಅಧಿಕ ಎಸಿಬಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು.

ಫ್ರೆಜರ್​ ಟೌನ್​ನಲ್ಲಿರುವ ಜಮೀರ್ ಮನೆ, ಸಿಲ್ವರ್ ಓಕ್ ಅಪಾರ್ಟ್ಮೆಂಟ್, ಸದಾಶಿವ ನಗರದ ಗೆಸ್ಟ್ ಹೌಸ್, ಬನಶಂಕರಿಯಲ್ಲಿರುವ ಜಿ.ಕೆ ಅಸೋಸಿಯೇಟ್ಸ್ ಕಚೇರಿ ಹಾಗೂ ಕಲಾಸಿಪಾಳ್ಯದಲ್ಲಿರುವ ನ್ಯಾಷನಲ್ ಟ್ರಾವೆಲ್ಸ್ ಮೇಲೆ ದಾಳಿ ನಡೆಸಲಾಗಿತ್ತು.

ಕಾಂಗ್ರೆಸ್​ ಶಾಸಕ ಜಮೀರ್ ಅಹಮ್ಮದ್​ ಖಾನ್​ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಬಗ್ಗೆ ಆದಾಯ ತೆರಿಗೆ ಇಲಾಖೆ ಅನಾಮಧೇಯ ಮೂಲಗಳಿಂದ ಮಾಹಿತಿ ಸಂಗ್ರಹ ಮಾಡಿತ್ತು. ಜಮೀರ್​​ ಕಳೆದ ಹಣಕಾಸು ವರ್ಷದಲ್ಲಿ ಘೋಷಿಸಿಕೊಂಡ ಆಸ್ತಿಗಿಂತ ದುಪ್ಪಟ್ಟು ಆಸ್ತಿ ಹೊಂದಿರುವ ಬಗ್ಗೆ ಐಟಿ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಇಡಿ ದಾಳಿ ಮಾಡಿತ್ತು.

ಎಸಿಬಿ ಡಿವೈಎಸ್ ಪಿ ಕೆ. ರವಿಶಂಕರ್ ಅವರಿಂದ ದೂರು ದಾಖಲಿಸಿ ತನಿಖೆ ನಡೆಯುತ್ತಿದೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಬಸವರಾಜ ಮಗದುಮ್ ಎನ್ನುವವರು ದೂರು ದಾಖಲಿಸಿದ್ದು, ಈ ತನಿಖೆ ಕೈಗೊಳ್ಳಲಾಗಿದೆ. ಇದೀಗ ಜಮೀರ್​ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಶಾಸಕ ಸ್ಥಾನಕ್ಕೆ ಕುತ್ತು ಬರಲಿದೆಯೇ ಎಂಬ ಮಾತು ಕೇಳಿಬರುತ್ತಿದೆ.

ಅಂದಹಾಗೆ, ಜಮೀರ್ ಅವರ ಆದಾಯ ಎಷ್ಟು.? ಅವರ ಒಟ್ಟು ಆಸ್ತಿ ಎಷ್ಟು.? ಅವರ ಒಟ್ಟು ವೆಚ್ಚ ಎಷ್ಟು.? ಇಲ್ಲಿದೆ ವಿವರ
ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988 ಕಲಂ 13(1)(b)r/w13(2) ಅಡಿಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಅದರ ವಿವರ ಹೀಗಿದೆ. ಇ.ಡಿ ದಾಖಲಿಸಿದ ಇಸಿಐಆರ್ ತನಿಖೆಯಲ್ಲಿ ಜಮೀರ್ ಅಹಮ್ಮದ್​ ಅವರು 2005 ರಿಂದ ಆಗಸ್ಟ್ 5, 2021 ರ ಅವದಿಯಲ್ಲಿ ತನ್ನ ಅಧಿಕಾರವನ್ನ ದುರುಪಯೋಗ ಪಡಿಸಿಕೊಂಡು ಅಪಾರ ಪ್ರಮಾಣದ ಆಸ್ತಿ ಗಳಿಸಿದ್ದಾರೆ.

ಇವರು ಆದಾಯಕ್ಕಿಂತ 87,44,05,057 ರೂ (ಸುಮಾರು 87.45 ಕೋಟಿ ರೂ) ಹೆಚ್ಚಿನ ಆಸ್ತಿ ಗಳಿಸಿದ್ದಾರೆ ಎಂದು ಎಫ್​ಐಆರ್​ನಲ್ಲಿ ಉಲ್ಲೇಖವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್!

Fri Jul 8 , 2022
ನವದೆಹಲಿ,ಜು.8: ಭ್ರಷ್ಟಾಚಾರದ ಆರೋಪ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ತನ್ನ ಪ್ರಮುಖ ಬುಲೆಟ್ ರೈಲು ಯೋಜನೆಯ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿಯನ್ನು ಗುರುವಾರ ವಜಾಗೊಳಿಸಿದೆ. ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಹೊರಡಿಸಿದ ಆದೇಶದ ಪ್ರಕಾರ, ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ (ಸಿಎಂಡಿ) ಸತೀಶ್ ಅಗ್ನಿಹೋತ್ರಿಯನ್ನು ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕೊನೆಗೊಳಿಸಲಾಗಿದೆ.  ಪ್ರಾಜೆಕ್ಟ್‌ಗಳ ನಿರ್ದೇಶಕ ರಾಜೇಂದ್ರ ಪ್ರಸಾದ್ ಸಿಎಂಡಿ ಜವಾಬ್ದಾರಿಯನ್ನು ವಹಿಸಿಕೊಂಡ ದಿನಾಂಕದಿಂದ ಮೂರು ತಿಂಗಳವರೆಗೆ ಅಥವಾ ಮುಂದಿನ ಆದೇಶದವರೆಗೆ […]

Advertisement

Wordpress Social Share Plugin powered by Ultimatelysocial