ಚಾಮರಾಜಪೇಟೆ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳ ವಿತರಣೆ & ಹಲವು ವಿದ್ಯಾರ್ಥಿಗಳ ಶಾಲಾ ಶುಲ್ಕ ಭರಿಸಲು ತಲಾ 50,000 ರೂ. ನೆರವು ಆರ್ಥಿಕ ನೆರವು ನೀಡಿದ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್

ಚಾಮರಾಜಪೇಟೆ ಕ್ಷೇತ್ರದ ಶಾಸಕರು ಮಾಜಿ ಸಚಿವರಾದ ಶ್ರೀ ಬಿ ಜೆಡ್ ಜಮೀರ್ ಅಹ್ಮದ್ ಖಾನ್ ಅವರು, ಪಾದರಾಯನಪುರ ವಾರ್ಡಿನ ಗೋರಿಪಾಳ್ಯದ ಸರ್ಕಾರಿ ಉರ್ದು ಮತ್ತು ಆಂಗ್ಲ ಮಾಧ್ಯಮ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿ, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ 19 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ದ್ವಿಚಕ್ರ ವಾಹನಗಳು ಹಾಗೂ ಇಬ್ಬರು ವಿಕಲ ಚೇತನರಿಗೆ ವಿಶೇಷ ತ್ರಿಚಕ್ರ ವಾಹನಗಳನ್ನು ವಿತರಿಸಿದರು.

ಇದೇ ವೇಳೆ, ನಮಗೆ ವಾಹನ ಬೇಡ, ಬದಲಾಗಿ ಶಾಲೆಯ ಶುಲ್ಕ ಪಾವತಿಸಲು ನೆರವು ನೀಡಿ ಎಂದು ಮನವಿ ಮಾಡಿದ ಹಲವು ವಿದ್ಯಾರ್ಥಿಗಳಿಗೆ ತಲಾ 50,000 ರೂ. ಗಳಂತೆ ಆರ್ಥಿಕ ನೆರವು ನೀಡಿದರು. ಈ ಪೈಕಿ ಪರೀಕ್ಷೆಯಲ್ಲಿ ಶೇ.97ರಷ್ಟು ಫಲಿತಾಂಶ ಗಳಿಸಿರುವ ವೈಶ್ಣವಿ ಎಂಬ ವಿದ್ಯಾರ್ಥಿನಿಗೆ 80 ಲಕ್ಷ ರೂ. ಧನ ಸಹಾಯದ‌ಜೊತೆಗೆ ದ್ವಿಚಕ್ರ ವಾಹನವನ್ನೂ ನೀಡಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ನನಗೆ ಭಗವಂತ ಅಧಿಕಾರ, ಐಶ್ವರ್ಯ, ನಿಮ್ಮೆಲ್ಲರ ಅಪಾರ ಪ್ರೀತಿ ಅಭಿಮಾನ ಕರುಣಿಸಿದ್ದಾನೆ. ಆದರೆ, ನಾನು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲಿಲ್ಲ ಎಂಬ ಕೊರಗು ಯಾವಾಗಲೂ ನನ್ನನ್ನು ಕಾಡುತ್ತಿರುತ್ತದೆ. ಹಾಗಾಗಿ, ನನ್ನ ಕ್ಷೇತ್ರದ ವಿದ್ಯಾರ್ಥಿಗಳ ವಿಚಾರದಲ್ಲಿ ಹಾಗಾಗಬಾರದು. ಅವರ ಶಿಕ್ಷಣಕ್ಕೆ ಅಗತ್ಯವಾದ ನೆರವನ್ನು ನಾನು ನೀಡುತ್ತಲೇ ಬಂದಿದ್ದೇನೆ. ಮುಂದೆಯೂ ನೀಡುತ್ತೇನೆ. ಚಾಮರಾಜಪೇಟೆ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಉತ್ತಮ ಫಲಿತಾಂಶ ಪಡೆಯುತ್ತಿರುವುದು ಸಂತಸದ ಸಂಗತಿ. ಪ್ರತಿವರ್ಷ ನನ್ನ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಿ, ಕೈಲಾದ ನೆರವು ನೀಡಲು ನಿರ್ಧರಿಸಿದ್ದೇನೆ ಎಂದು ಅವರು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜಿಎಸ್ ಟಿ ವಿಚಾರವಾಗಿ ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ಮಾಧ್ಯಮ ಪ್ರತಿಕ್ರಿಯೆ:

Wed Jul 20 , 2022
ಜಿಎಸ್ ಟಿ ಆರಂಭವಾದಾಗಲೇ ಆಹಾರ ಪದಾರ್ಥಗಳು ಪ್ಯಾಕೇಜ್ ಆಗಿದ್ದರೂ ಅವುಗಳನ್ನು ಜಿಎಸ್ ಟಿಯಿಂದ ಹೊರಗಿಡಬೇಕು ಎಂದು ನಾವು ಪ್ರತಿಪಾದನೆ ಮಾಡಿದ್ದೇವೆ. ಈ ಬಗ್ಗೆ ಚರ್ಚೆ ಮಾಡಿದ ನಂತರವಷ್ಟೇ ಸಾಮಾನ್ಯ ವರ್ಗದವರು ಬಳಸುವ ಆಹಾರ ಪದಾರ್ಥ ಹೊರಗಿಡಬೇಕು ಎಂದು ತೀರ್ಮಾನಿಸಲಾಗಿತ್ತು. ಆದರೆ ಈಗ ಇವುಗಳನ್ನು ಬದಲಾವಣೆ ಮಾಡುತ್ತಿರುವುದು ಆಶ್ಚರ್ಯಕರ ವಿಚಾರವಾಗಿದೆ. ಈ ಆಹಾರ ಪದಾರ್ಥಗಳನ್ನು ತೆರಿಗೆ ವ್ಯಾಪ್ತಿಗೆ ತೆಗೆದುಕೊಂಡು ಬಂದರೂ ಕೂಡ ಸರ್ಕಾರಕ್ಕೆ ಇದರಿಂದ ದೊಡ್ಡ ಆದಾಯ ಬರುವುದಿಲ್ಲ. ಈ ತೆರಿಗೆ […]

Advertisement

Wordpress Social Share Plugin powered by Ultimatelysocial