ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಕ್ಕೆ ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ

ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಕ್ಕೆ ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣ

ಸುಬ್ರಹ್ಮಣ್ಯ : ರಾಜ್ಯದಲ್ಲಿ ಹೆಚ್ಚಿನ ಪ್ರಯಾಣಿಕರು ಸಂದರ್ಶಿಸುವ ರೈಲು ನಿಲ್ದಾಣಗಳ ಸಾಲಿನಲ್ಲಿ ಬರುವ ಸುಬ್ರಹ್ಮಣ್ಯ ರೋಡ್ ಅಥವಾ ನೆಟ್ಟಣ ರೈಲು ನಿಲ್ದಾ ಕರ್ನಾಟಕಣದಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳು ನಡೆಯದೇ ಇರುವುದರಿಂದ ರೈಲ್ವೇ ಪ್ರಯಾಣಿಕರು ದಿನಂಪ್ರತಿ ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ.

ದೇಶದ ಹಾಗೂ ರಾಜ್ಯದ ಪ್ರಸಿದ್ಧ ಯಾತ್ರಾ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯವನ್ನು ಸಂದರ್ಶಿಸಲು ರೈಲುಮಾರ್ಗದ ಮುಖಾಂತರ ಆಗಮಿಸುವ ಪ್ರವಾಸಿಗರು ಸುಬ್ರಹ್ಮಣ್ಯ ರೋಡ್ ರೈಲ್ವೆ ನಿಲ್ದಾಣದಲ್ಲಿ ಇಳಿಯಬೇಕಾಗುತ್ತದೆ.ಆದರೆ ಕಡಬ ತಾಲೂಕಿನ ನೆಟ್ಟಣದ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಸಾರ್ವಜನಿಕ ಆಗ್ರಹ ವ್ಯಕ್ತವಾಗಿದೆ.

ಇಲ್ಲಿನ ರೈಲ್ವೇ ನಿಲ್ದಾಣದಲ್ಲಿ ಹೆಚ್ಚುವರಿ ಪ್ಲಾಟ್‌ಫಾರಂ ನಿರ್ಮಿಸಲಾಗಿದ್ದರೂ ಪಾದಾಚಾರಿ ಮೇಲ್ಸೇತುವೆ ಇನ್ನೂ ನಿರ್ಮಾಣಗೊಂಡಿಲ್ಲ. ಎರಡು ವರ್ಷಗಳ ಹಿಂದೆ ಈ ಬಗ್ಗೆ ಟೆಂಡರ್ ನಡೆದರೂ ಕಾಮಗಾರಿ ನಡೆಸದೇ ಇರುವ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ. ಪಾದಾಚಾರಿ ಮೇಲ್ಸೇತುವೆ ಇಲ್ಲದೇ ಇರುವುದರಿಂದ ಇನ್ನೊಂದು ಬದಿಯ ಪ್ಲಾಟ್‌ಫಾರಂನಲ್ಲಿ ಬಂದಿಳಿಯುವ ಮಕ್ಕಳು ವೃದ್ದರೂ ಸಹಿತ ಪ್ರಯಾಣಿಕರು ರೈಲ್ವೇ ಹಳಿಗೆ ಇಳಿದು ಹಳಿಯಲ್ಲೇ ನಡೆದುಕೊಂಡು ಬಂದು. ಈ ಭಾಗದ ಪ್ಲಾಟ್‌ಫಾರಂನ್ನು ತ್ರಾಸದಾಯಕವಾಗಿ ಹತ್ತಬೇಕಾಗಿದೆ. ಅಲ್ಲದೇ ಜೀವದ ಹಂಗು ತೊರೆದು ಪ್ರಯಾಣಿಕರು ನಿತ್ಯ ಸಂಕಷ್ಟ ಅನುಭವಿಸುತ್ತಿರುತ್ತಾರೆ ಎಂಬ ಆರೋಪ ವ್ಯಕ್ತವಾಗಿದೆ. ಈತನಕ ಎರಡನೇ ಪ್ಲಾಟ್‌ಫಾರಂನಲ್ಲಿ ಪ್ರಯಾಣಿಕರಿಗೆ ನಿಲ್ಲಲೂ ಯಾವುದೇ ವ್ಯವಸ್ಥೆ ಮಾಡಲಾಗಿಲ್ಲ. ಯಾವ ಕಾರಣಕ್ಕೆ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂಬ ಬಗ್ಗೆಯೂ ಯಾರಲ್ಲಿಯೂ ಮಾಹಿತಿ ಇಲ್ಲ.

ರಾತ್ರಿ ಸಮಯದಲ್ಲಿ ಇಲ್ಲಿ ರೈಲು ಬಂದಾಗ ಟಿಕೇಟ್ ನೀಡುವ ವ್ಯವಸ್ಥೆ ಇಲ್ಲ. ಕೌಂಟರ್ ಇದ್ದರೂ ಟಿಕೇಟ್ ನೀಡಲು ಆದೇಶ ಇಲ್ಲ ಎನ್ನಲಾಗಿದೆ. ಯಾತ್ರಾರ್ಥಿಗಳು ಮಾಹಿತಿ ಕೊರತೆಯಿಂದ ರಾತ್ರಿ ವೇಳೆ ನಿಲ್ಧಾಣಕ್ಕೆ ಬಂದಲ್ಲಿ ಟಿಕೇಟ್ ಆಲಭ್ಯತೆಯಿಂದ ನಿಲ್ದಾಣದಲ್ಲೇ ಯಾವುದೇ ಸಂರಕ್ಷಣಾ ವ್ಯವಸ್ಥೆ ಇಲ್ಲದೇ ರಾತ್ರಿ ಕಳೆಯಬೇಕಾಗಿದೆ. ಅಧಿಕಾರಿಗಳು ಹೇಳುವಂತೆ ಕೆಲವು ರೈಲುಗಳಿಗೆ ಟಿಕೇಟ್ ನೀಡಲಾಗುತ್ತಿದೆ. ಆದರೆ ಆ ಆದೇಶಗಳೇ ಬೇರೆ, ಆಗಬೇಕಿರುವುದೇ ಬೇರೆ ಎಂಬ ಮಾತು ಕೇಳಿ ಬಂದಿದೆ. ಬಿಜಾಪುರ್ ಎಕ್ಸ್‌ಪ್ರೆಸ್, ಕಾರಾವಾರ-ಬೆಂಗಳೂರು, ಮಂಗಳೂರು-ಬೆಂಗಳೂರು, ಕಣ್ಣೂರು-ಬೆಂಗಳೂರು ಹೀಗೆ ನಾಲ್ಕೈದು ಕಡೆಗಳ ರೈಲುಗಳು ಇಲ್ಲಿ ರಾತ್ರಿ ಹಾಗೂ ಹಗಲಲ್ಲಿ ನಿಲ್ಲಬೇಕಾಗಿದ್ದು, ಇವುಗಳಿಗೆ ಇಲ್ಲೇ ಟಿಕೇಟ್ ನೀಡುವ ವ್ಯವಸ್ಥೇ ಆಗಬೇಕೆಂಬುದು ಬೇಡಿಕೆ. ತುರ್ತು ವೈದ್ಯಕೀಯ ಕೇಂದ್ರ,ಮೆಡಿಕಲ್ ವ್ಯವಸ್ಥೆಗಳು ಇಲ್ಲಿ ಇಲ್ಲ. ದೂರದ ಕಡಬ ಅಥವಾ ಸುಬ್ರಹ್ಮಣ್ಯಕ್ಕೆ ತೆರಳಬೇಕಾದ ಪರಿಸ್ಥಿತಿ ಇಲ್ಲಿದೆ. ವೈದ್ಯಕೀಯ ಕೇಂದ್ರ ಇದ್ದರೂ ಸಿಬ್ಬಂದಿಗಳು ಪುತ್ತೂರಿನಿಂದ ಮೂರು ದಿನಕೊಮ್ಮೆ ಇಲ್ಲಿಗೆ ಬರುವುದು ಎಂದು ತಿಳಿದುಬಂದಿದ್ದು, ಖಾಯಂ ಆಗಿ ಇಲ್ಲಿಯೇ ವೈದ್ಯರು ಹಾಗೂ ಔಷಧಿ ವಿತರಣೆ ವ್ಯವಸ್ಥೆ ಕಲ್ಪಿಸಬೇಕೆಂಬುದು ಪ್ರಯಾಣಿಕರ ಆಗ್ರಹವಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಸದ್ದು ಮಾಡುತ್ತಿದೆ ಹೇಮಾಮಾಲಿನಿ ಕೆನ್ನೆ

Tue Dec 21 , 2021
ಮುಂಬೈ: ರಾಜಕಾರಣಿಗಳು ನಾಲಗೆ ಹರಿಬಿಡುತ್ತ ಮಹಿಳೆಯರನ್ನು ಯಾವುದ್ಯಾವುದಕ್ಕೋ ಹೋಲಿಕೆ ಮಾಡುವ ಘಟನೆಗಳು ಹೆಚ್ಚುತ್ತಲೇ ಇವೆ. ಇತ್ತ ಮಾಜಿ ಸ್ಪೀಕರ್‌ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದರೆ, ಅತ್ತ ಮಹಾರಾಷ್ಟ್ರ ಸಚಿವ ಗುಲಾಬ್ ರಾವ್ ಪಾಟೀಲ್ ಹೆದ್ದಾರಿಯನ್ನು ನಟಿ, ಸಂಸದೆ ಹೇಮಾಮಾಲಿನಿ ಕೆನ್ನೆಗೆ ಹೋಲಿಸಿ, ಭಾರಿ ಟೀಕೆಗೆ ಗುರಿಯಾಗಿದ್ದಾರೆ. 2019ರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಲಾಲೂ ಪ್ರಸಾದ್‌ ಯಾದವ್‌ ಕೂಡ ಅಲ್ಲಿಯ ರಸ್ತೆಗಳನ್ನು ಹೇಮಾಮಾಲಿನಿ (73) ಕೆನ್ನೆಗೆ ಹೋಲಿಸಿ ಟೀಕೆಗೆ ಗುರಿಯಾಗಿದ್ದರು. ಈಗ ಮತ್ತೆ ನಟಿಯ ಕೆನ್ನೆ […]

Advertisement

Wordpress Social Share Plugin powered by Ultimatelysocial