ದುನಿಯಾ ವಿಜಯ್ ಮೊಟ್ಟ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ ‘ಸಲಗ’ ಚಿತ್ರ ಅಕ್ಟೋಬರ್ 14ಕ್ಕೆ ತೆರೆಗೆ ಬರಲಿದೆ. ಸಿನಿಮಾ ತಂಡದಿಂದ ಈಗಾಗಲೇ ಪ್ರಚಾರ ಜೋರಾಗಿದ್ದು ಸಿನಿಮಾವನ್ನು ಹೆಚ್ಚು ಮಂದಿಗೆ ತಲುಪಿಸುವ ಪ್ರಯತ್ನದಲ್ಲಿದೆ. ‘ಸಲಗ’ ಚಿತ್ರತಂಡ ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ‘ಸಲಗ’ದ ಟ್ರೈಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ಕುಮಾರ್ ಸಹ ಬರಲಿದ್ದಾರೆ. ಪುನೀತ್ ರಾಜ್ಕುಮಾರ್, ಸಿದ್ದರಾಮಯ್ಯ ಹಾಗೂ ಇನ್ನಿತರು ಅತಿಥಿಗಣ್ಯರು ‘ಸಲಗ’ ಸಿನಿಮಾದ ಟ್ರೈಲರ್ ಲಾಂಚ್ ಅದ್ದೂರಿಯಾಗಿ ಮಾಡಲಿದ್ದಾರೆ.ಪುನೀತ್, ದುನಿಯಾ ವಿಜಯ್ ಜೊತೆಯಾಗಿರುವ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿವೆ.
ಟ್ವೀಸ್ಟ್ ಅಂದ್ರೆ ಇದಪ್ಪ ‘ಸಲಗ’ ಸಿನಿಮಾಕ್ಕೆ ಪ್ರತಿಸ್ಪರ್ಧಿಯಾಗಿ ಕಿಚ್ಚ ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಎದುರಾಗಿದೆ. ಎರಡೂ ಸಿನಿಮಾಗಳು ಅಕ್ಟೋಬರ್ 14ರಂದೇ ಚಿತ್ರಮಂದಿರಕ್ಕೆ ಬರುತ್ತಿವೆ. ಯಾವ ಸಿನಿಮಾ ಸಿನಿ ಪ್ರೇಕ್ಷಕರನ್ನು ಹೆಚ್ಚು ಗಮನ ಸೆಳೆಯುತ್ತದೆ ಎಂಬುದು ಕಾದು ನೋಡಬೇಕಿದೆ.
‘ಸಲಗ’ ಸಿನಿಮಾದ ಎರಡು ಹಾಡುಗಳು ಈವರೆಗೆ ಬಿಡುಗಡೆ ಆಗಿದ್ದು, ಎರಡೂ ಹಾಡುಗಳು ಮಸ್ತ್ ಹಿಟ್ ಆಗಿವೆ. ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡಿರುವ ಕಾರಣ ಸಿನಿಮಾದ ಬಗ್ಗೆ ಕುತೂಹಲ ಇನ್ನಷ್ಟು ಹೆಚ್ಚಿದೆ. ಸಿನಿಮಾದಲ್ಲಿ ಡಾಲಿ ಧನಂಜಯ್, ಸಂಜಯ್ ಆನಂದ್, ತ್ರಿವೇಣಿ ರಾವ್, ಅಚ್ಯುತ್ ಕುಮಾರ್,ಕೋಕ್ ರೋಜ್ ಇನ್ನೂ ಹಲವು ನಟರು ನಟಿಸಿದ್ದಾರೆ.