ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ

ದೇಶದಲ್ಲಿ ಕೊರೊನಾ ವೈರಸ್ ರಣಕೇಕೆ ಕಾಕುತ್ತಿದ್ದು,ಒಂದೇ ದಿನದಲ್ಲಿ 500 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 28,701 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಈವರೆಗೂ 5,53,471 ಲಕ್ಷ ಜನರು ವೈರಸ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು ಉಳಿದ 3,01,609 ಮಂದಿ ಕೋವಿಡ್ ಕೇಂದ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮತ್ತು ಒಂದೇ ದಿನದಲ್ಲಿ 18,850 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ.

Please follow and like us:

Leave a Reply

Your email address will not be published. Required fields are marked *

Next Post

ಲಾಕ್‌ಡೌನ್ ಮಾಡುವಂತೆ ಕುಮಾರಸ್ವಾಮಿ ಸಲಹೆ

Mon Jul 13 , 2020
ಭಾನುವಾರ ಮಾಜಿ ಸಿಎಂ ಕುಮಾರಸ್ವಾಮಿರವರು ಕಂದಾಯ ಸಚಿವ ಆರ್‌.ಅಶೋಕ್‌ ಮತ್ತು ರಾಮನಗರ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಯೊಂದಿಗೆ ಸಮಾಲೋಚನೆ ನಡೆಸಿದರು. ಸಮಾಲೋಚನೆಯಲ್ಲಿ ರಾಮನಗರ ಲಾಕ್‌ ಡೌನ್‌ ಅಗತ್ಯತೆ ಬಗ್ಗೆ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯಲ್ಲಿ  ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಮನಗರದಲ್ಲಿ ಲಾಕ್ ಡೌನ್ ಘೋಷಿಸಬೇಕು. ಅಲ್ಲದೇ, ವೈರಸ್ ಪರೀಕ್ಷೆ ನಡೆಸಿದ ದಿನವೇ ವರದಿ ನೀಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial