ಭಾರತದಲ್ಲಿ ಕೊರೊನಾ ವೈರಸ್ ಮಹಾಮಾರಿ ಇದುವರೆಗೂ ಪತ್ತೆಯಾಗಿರುವ ಸೋಂಕಿತ ಪ್ರಕರಣಗಳಲ್ಲೇ ಇದು ಅತಿಹೆಚ್ಚು ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 8,380 ಮಂದಿಯಲ್ಲಿ ಸೋಂಕು ತಗುಲಿರುವುದು ದೃಡಪಟ್ಟಿವೆ. ಒಟ್ಟು ಸೋಂಕಿತರ ಸಂಖ್ಯೆ 1,82,143ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 193 ಮಂದಿ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾರೆ. ಸೋಂಕು ತಗುಲಿ ಸಾವ್ನಪ್ಪಿದ್ದವರ ಸಂಖ್ಯೆಯು 5,164ಕ್ಕೆ ಏರಿಕೆಯಾಗಿದೆ. ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ. ಇದರಲ್ಲಿ 86,984 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.ಇನ್ನೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.