ವಲಯ ಉಸ್ತುವಾರಿಗಳಿಗೆ ಸಿಎಂ ಸಲಹೆ

ಲಾಕ್ ಡೌನ್ ವಿಸ್ತರಣೆ ಬಗ್ಗೆ ರ‍್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮರ‍್ಗಗಳ ಬಗ್ಗೆ ಆಲೋಚಿಸಿ ಎಂದು ವಲಯ ಉಸ್ತುವಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬೆಂಗಳೂರು ಲಾಕ್ ಡೌನ್ ಕುರಿತ ಸ್ಥಿತಿಗತಿ ರ‍್ಚೆ ವೇಳೆ ಬಹುತೇಕ ಸಚಿವರು ಲಾಕ್ ಡೌನ್ ವಿಸ್ತರಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಒಂದು ವಾರದ ಲಾಕ್ ಡೌನ್ ನಿಂದ ಕೊರೊನಾ ಹಬ್ಬುವಿಕೆ ನಿಯಂತ್ರಣ ಕಷ್ಟ, ಇನ್ನಷ್ಟು ದಿನಗಳ ಕಾಲ ವಿಸ್ತರಣೆ ಅಗತ್ಯವಿದೆ ಎಂದರು. ಇದಕ್ಕೆ ಮತ್ತೆ ಕೆಲ ಸಚಿವರು ದನಿಗೂಡಿಸಿದರು. ಸಭೆಯಲ್ಲಿ ಬಹುತೇಕರಿಂದ ಲಾಕ್ ಡೌನ್ ವಿಸ್ತರಣೆ ಬಗ್ಗೆ ಪದೇ ಪದೆ ಕೇಳಿಬಂದ ಅಭಿಪ್ರಾಯಕ್ಕೆ ಸಿಎಂ ಅಸಮಧಾನ ವ್ಯಕ್ತಪಡಿಸಿದರು. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾತುಗಳು ಸಾಕು. ಈ ಬಗ್ಗೆ ಮುಂದೆ ನೋಡೋಣ, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಬೇರೆ ಮರ‍್ಗಗಳ ಬಗ್ಗೆ ಆಲೋಚನೆ ಮಾಡಿ ಎಂದು ಸಲಹೆ ನೀಡಿದರು.

Please follow and like us:

Leave a Reply

Your email address will not be published. Required fields are marked *

Next Post

ತಿರುಪತಿ ದೇವಸ್ಥಾನವನ್ನು ಮುಚ್ಚುವುದಿಲ್ಲ

Fri Jul 17 , 2020
ಬಾಲಾಜಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ದೇವರ ದರ್ಶನವನ್ನು ನಿಲ್ಲಿಸುವುದಿಲ್ಲ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್​ (ಟಿಟಿಡಿ) ಶುಕ್ರವಾರ ಸ್ಪಷ್ಟಪಡಿಸಿದೆ.ದೇಗುಲದ 15 ಪ್ರಮುಖ ಅರ್ಚಕರು ಸೇರಿ 140ಕ್ಕೂ ಹೆಚ್ಚು ಸಿಬ್ಬಂದಿ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಆದರೂ ದೇಗುಲವನ್ನು ಮತ್ತೊಮ್ಮೆ ಮುಚ್ಚಿ, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಾರದಂತೆ ತಡೆಯುವುದಿಲ್ಲ ಎಂದು ಟಿಟಿಡಿಯ ಚೇರ್​ಪರ್ಸನ್​ ವೈ.ವಿ. ಸುಬ್ಬಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.ಮಾರ್ಚ್​ನಲ್ಲಿ ದೇಶಾದ್ಯಂತ ಲಾಕ್​ಡೌನ್​ ಘೋಷಣೆಯಾದ ಹಿನ್ನೆಲೆಯಲ್ಲಿ ವಿಶ್ವಪ್ರಸಿದ್ಧ ತಿರುಪತಿ ದೇಗುಲವನ್ನು ಕೂಡ ಮುಚ್ಚಲಾಗಿತ್ತು. […]

Advertisement

Wordpress Social Share Plugin powered by Ultimatelysocial